About Kannada / ಕನ್ನಡ ಸಾಹಿತ್ಯ ಚರಿತ್ರೆ

ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಭಾಷೆ ಕನ್ನಡ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು . ಕನ್ನಡ ಸಾಹಿತ್ಯ ಭಾರತದಲ್ಲಿ ಮೂರನೇ ಅತಿ ಹಳೆಯ ಸಾಹಿತ್ಯಕ ಸಂಪ್ರದಾಯ,ಸಂಸ್ಕೃತ ಸಾಹಿತ್ಯ(ಮತ್ತು ಅದರ ಉಪಭಾಷೆಗಳಾದ ಪ್ರಾಕೃತ ಇತ್ಯಾದಿ) .

ಕನ್ನಡ ಬರವಣಿಗೆಯ ಪ್ರಪ್ರಥಮ ಉದಾಹರಣೆ ದೊರಕಿರುವುದು ಹಲ್ಮಿಡಿ ಶಾಸನದಲ್ಲಿ (ಸು. ಕ್ರಿ.ಶ. ೪೫೦). ಪ್ರಸಿದ್ಧವಾದ ಬಾದಾಮಿ ಶಾಸನಗಳು ಪುರಾತನ ಕನ್ನಡ ಬರವಣಿಗೆಯ ಮತ್ತಷ್ಟು ಉದಾಹರಣೆಗಳನ್ನು ನೀಡುತ್ತವೆ. ಉಪಲಬ್ಧವಾಗಿರುವ ಪ್ರಥಮ ಕನ್ನಡ ಪುಸ್ತಕವೆಂದರೆ ೯ ನೇ ಶತಮಾನದ ಅಮೋಘವರ್ಷ ನೃಪತುಂಗನ ಕವಿರಾಜಮಾರ್ಗ. ಈ ಪುಸ್ತಕ ಕನ್ನಡ ಕಾವ್ಯ, ಕನ್ನಡ ನಾಡು, ಮತ್ತು ಕನ್ನಡಿಗರ ಬಗ್ಗೆ ಬರೆಯಲ್ಪಟ್ಟ ಒಟ್ಟಾರೆ ಸಾರಾಂಶವೆನ್ನಬಹುದು.

ಇದಕ್ಕೆ ಹಿಂದೆ ಬರೆಯಲ್ಪಟ್ಟ ಕೆಲವು ಕನ್ನಡ ಪುಸ್ತಕಗಳ ಉಲ್ಲೇಖಈ ಪುಸ್ತಕದಲ್ಲಿ ಬಂದಿರುವ ಆಧಾರದ ಮೇಲೆ ಕನ್ನಡ ಸಾಹಿತ್ಯದ ಉಗಮ ಸುಮಾರು ಕ್ರಿ.ಶ. ೬-೭ನೇ ಶತಮಾನಗಳಲ್ಲಿ ಆದದ್ದಿರಬಹುದು. ಆದರೆ ಕವಿರಾಜಮಾರ್ಗದ ಹಿಂದಿನ ಯಾವ ಕೃತಿಗಳೂ ಇದುವರೆಗೆ ದೊರಕಿಲ್ಲ.

ಕನ್ನಡ ಸಾಹಿತ್ಯದ ಚರಿತ್ರೆಯನ್ನು ಮೂರು ಘಟ್ಟಗಳಾಗಿ ವಿಂಗಡಿಸ ಬಹುದು:*

  1. ಹಳೆಗನ್ನಡ,
  2. ನಡುಗನ್ನಡ
  3. ಆಧುನಿಕ ಕನ್ನಡ.

ಹಳೆಗನ್ನಡ :

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನುಹಳೆಗನ್ನಡಎಂದು ಗುರುತಿಸಬಹುದು. ಈ ಕಾಲದ ಸಾಹಿತ್ಯ ಮುಖ್ಯವಾಗಿಜೈನ ಧರ್ಮವನ್ನುಅವಲಂಬಿಸಿದೆ.ಕನ್ನಡಚರಿತ್ರೆಯ ಈ ಘಟ್ಟಕ್ಕೆಆದಿ-ಕಾವ್ಯಎಂದೂ ಸಹ ಕರೆಯಬಹುದು. ಈ ಕಾಲದ ಅತಿ ಪ್ರಸಿದ್ಧ ಕವಿಯೆಂದರೆಪಂಪ(ಕ್ರಿ.ಶ.೯೦೨-೯೭೫) .ಪಂಪನವಿಕ್ರಮಾರ್ಜುನ ವಿಜಯಅಥವಾಪಂಪ ಭಾರತಇಂದಿಗೂ ಮೇರು ಕೃತಿಯೆಂದು ಪರಿಗಣಿತವಾಗಿದೆ.* ಪಂಪ ಭಾರತ ಮತ್ತು ತನ್ನ ಇನ್ನೊಂದು ಮುಖ್ಯಕೃತಿಯಾದಆದಿಪುರಾಣದ ಮೂಲಕ ಪಂಪ ಕನ್ನಡ ಕಾವ್ಯಪರಂಪರೆಯ ದಿಗ್ಗಜರಲ್ಲಿ ಒಬ್ಬನಾಗಿದ್ದಾನೆ. ಪಂಪ ಭಾರತಸಂಸ್ಕೃತಮಹಾಭಾರತದಕನ್ನಡ ರೂಪಾಂತರ. ತನ್ನ ಮಾನವತಾವಾದ ಹಾಗೂ ಗಂಭೀರ ಲೇಖನಶೈಲಿಯ ಮೂಲಕ ಕನ್ನಡದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾಗಿದ್ದಾನೆ.‘ ಮಾನವ ಕುಲ ತಾನೊಂದೇ ವಲಂ’ ಎಂದುವಿಶ್ವಮಾನವ ತತ್ವವನ್ನು ಸಾರಿದ ಜಗದ ಕವಿ ಪಂಪ.

ಇದೇ ಕಾಲದ ಇನ್ನೊಬ್ಬ ಪ್ರಮುಖ ಲೇಖಕನೆಂದರೆಶಾಂತಿನಾಥ ಪುರಾಣವನ್ನು ರಚಿಸಿದಪೊನ್ನ(೯೩೯-೯೬೬). ಈ ಕಾಲದ ಮತ್ತೊಬ್ಬ ಹೆಸರಾಂತಕವಿರನ್ನ(೯೪೯-?). ರನ್ನನ ಪ್ರಮುಖ ಕೃತಿಗಳು ಜೈನ ಧರ್ಮೀಯವಾದ ಅಜಿತ ತೀರ್ಥಂಕರ ಪುರಾಣ ಮತ್ತು ಗದಾಯುದ್ಧಂ ಅಥವಾ ಸಾಹಸ ಭೀಮ ವಿಜಯ. ಇದು ಇಡೀ ಮಹಾಭಾರತದ ಒಂದು ಸಿಂಹಾವಲೋಕನ ದೃಷ್ಟಿ.ಮಹಾಭಾರತಯುದ್ಧದ ಕೊನೆಯ ದಿನದಲ್ಲಿ ಸ್ಥಿತವಾಗಿದ್ದರೂ ಸಿಂಹಾವಲೋಕನ ಕ್ರಮದಲ್ಲಿ ಇಡಿಯ ಮಹಾಭಾರತವನ್ನು ಪರಿಶೀಲಿಸುತ್ತದೆ.ಛಂದಸ್ಸಿನದೃಷ್ಟಿಯಿಂದ ಈ ಕಾಲದ ಕಾವ್ಯಚಂಪೂಶೈಲಿಯಲ್ಲಿದೆ (ಒಂದು ರೀತಿಯ ಗದ್ಯ ಮಿಶ್ರಿತ ಪದ್ಯ)

ನಡುಗನ್ನಡ :

ನಡುಗನ್ನಡ ಸಾಹಿತ್ಯದಲ್ಲಿ ಅನೇಕ ಹೊಸ ಸಾಹಿತ್ಯ ಪ್ರಕಾರಗಳು ಬೆಳಕಿಗೆ ಬಂದವು. ಇವುಗಳಲ್ಲಿ ಮುಖ್ಯವಾದವು ರಗಳೆ, ಸಾಂಗತ್ಯ ಮತ್ತು ದೇಸಿ. ಈ ಕಾಲದ ಸಾಹಿತ್ಯಜೈನ,ಹಿಂದೂ ಹಾಗೂ ಜಾತ್ಯತೀತ ಬೋಧನೆಗಳ ಮೇಲೆ ಆಧಾರಿತವಾಗಿದೆ. ಈ ಘಟ್ಟದ ಪ್ರಮುಖ ಲೇಖಕರಲ್ಲಿ ಇಬ್ಬರೆಂದರೆ ಹರಿಹರ ಮತ್ತು ರಾಘವಾಂಕ. ಇಬ್ಬರೂ ತಮ್ಮದೇ ಶೈಲಿಯಲ್ಲಿ ಕನ್ನಡ ಸಾಹಿತ್ಯದ ದಾರಿಯನ್ನು ಬೆಳಗಿದವರು. ಹರಿಹರ ರಗಳೆ ಸಾಹಿತ್ಯವನ್ನು ಬಳಕೆಗೆ ತಂದನು, ತನ್ನ ಶೈವ ಮತ್ತುವೀರಶೈವ ಕೃತಿಗಳ ಮೂಲಕ. ರಾಘವಾಂಕ ತನ್ನ ಆರು ಕೃತಿಗಳ ಮೂಲಕ ಷಟ್ಪದಿ ಛಂದಸ್ಸನ್ನು ಜನಪ್ರಿಯಗೊಳಿಸಿದನು. ಅವನ ಮುಖ್ಯ ಕೃತಿಹರಿಶ್ಚಂದ್ರ ಕಾವ್ಯ, ಪೌರಾಣಿಕ ಪಾತ್ರವಾದ ಹರಿಶ್ಚಂದ್ರನ ಜೀವನವನ್ನು ಕುರಿತದ್ದು. ಈ ಕೃತಿ ಸಹ ತನ್ನ ತೀವ್ರವಾದ ಮಾನವತಾವಾದಕ್ಕೆ ಪ್ರಸಿದ್ಧವಾಗಿದೆ.

ಇದೇ ಕಾಲದ ಇನ್ನೊಬ್ಬ ಪ್ರಸಿದ್ಧ ಜೈನ ಕವಿಜನ್ನ. ತನ್ನ ಕೃತಿಗಳಾದ ಯಶೋಧರ ಚರಿತೆ ಮತ್ತು ಅನಂಥನಾಥ ಪುರಾಣಗಳ ಮೂಲಕ ಜೈನ ಸಂಪ್ರದಾಯದ ಬಗ್ಗೆ ಬರೆದನು. ಇದೇ ಕಾಲದ ಕನ್ನಡ ವ್ಯಾಕರಣದ ಬಗೆಗಿನ ಮುಖ್ಯ ಕೃತಿ ಕೇಶಿ ರಾಜನ ಶಬ್ದಮಣಿ ದರ್ಪಣ.

*ವಚನ ಸಾಹಿತ್ಯ*

ವಚನಗಳು ಎಂದು ಸಾಮಾನ್ಯವಾಗಿ ಕರೆಯಲಾಗುವ ವೀರಶೈವ ಶರಣರ ವಚನಗಳು ಮುಕ್ತ ಛಂದಸ್ಸಿನಲ್ಲಿವೆ. ಬಸವೇಶ್ವರ, ಅಕ್ಕಮಹಾದೇವಿ ಮೊದಲಾದವರ ವಚನಗಳನ್ನು ಶಾಸ್ತ್ರೀಯ ಸಂಗೀತದಲ್ಲಿ ಅಳವಡಿಸಿ ಮಲ್ಲಿಕಾರ್ಜುನ ಮನಸೂರ ಮೊದಲಾದ ಹಿಂದುಸ್ತಾನಿ ಸಂಗೀತ ಕಾರರು ಹಾಡಿದ್ದಾರೆ. ಶರಣರ ನಂತರದ ಕವಿಯಾದಸರ್ವಜ್ಞರವಚನಗಳು ಮಾತ್ರ ತ್ರಿಪದಿಯಲ್ಲಿವೆ.

ವಚನಗಳು ಅಂದಿನ ಕಾಲದ ಸಾಮಾಜಿಕ, ಧಾರ್ಮಿಕ ಮತ್ತು ಆರ್ಥಿಕ ಪರಿಸ್ಥಿತಿಗಳ ಬಗೆಗಿನ ಯೋಚನಾಧಾರೆಗಳು. ಇನ್ನೂ ಮುಖ್ಯವಾಗಿ, ವಚನ ಸಾಹಿತ್ಯ ಅಂದಿನ ಸಾಮಾಜಿಕ ಕ್ರಾಂತಿಯ ಪ್ರಕ್ರಿಯೆಗೆ ಕನ್ನಡಿ ಹಿಡಿಯುತ್ತದೆ. ಬಸವಣ್ಣನವರಿಂದ ಆರಂಭವಾದ ಈ ಕ್ರಾಂತಿ ಜಾತಿ, ಮತ, ಧರ್ಮಗಳ ಯೋಚನೆಗಳ ಕ್ರಾಂತಿಕಾರಿ ಮರು-ಪರಿಶೀಲನೆಗೆ ದಾರಿ ಮಾಡಿಕೊಟ್ಟಿತು.

ವಚನ ಸಾಹಿತ್ಯದಿಂದ ಬಂದ ಮುಖ್ಯ ಬೋಧನೆಗಳೆಂದರೆ ಕಾಯಕವೇ ಕೈಲಾಸ ಮತ್ತು ಅಧ್ಯಾತ್ಮಿಕತೆಯ ಬಗ್ಗೆ ಹೊಸ ನೋಟ. ವಚನ ಸಾಹಿತ್ಯದ ಪ್ರಮುಖ ಹರಿಕಾರರೆಂದರೆ ಬಸವೇಶ್ವರ (೧೧೩೪-೧೧೯೬), ಅಲ್ಲಮ ಪ್ರಭು ಮತ್ತು ಕನ್ನಡದ ಮೊದಲ ಮಹಿಳಾ ಲೇಖಕಿಯಾದಅಕ್ಕ ಮಹಾದೇವಿ (೧೨ನೇ ಶತಮಾನ). ಇವರಲ್ಲದೆ ಜೇಡರ ದಾಸಿಮಯ್ಯ ಅಂಬಿಗರ ಚೌಡಯ್ಯ ಇನ್ನೂ ಮೊದಲಾವ ವಚನಕಾರರು ವಚನ ಸಾಹಿತ್ಯಕ್ಕೆ ಉತ್ತಮ ಕಾಣಿಕೆ ನೀಡಿದ್ದಾರೆ.

ಆಧುನಿಕ ಕನ್ನಡಕನ್ನಡದ ನವೋದಯ

ನವೋದಯ ಎಂದರೆಹೊಸ ಹುಟ್ಟು/ಹೊಸದು. ಬ್ರಿಟಿಷ್ ಆಳ್ವಿಕೆಯ ಪ್ರಾರಂಭಿಕ ಹಂತಗಳಲ್ಲಿ ಹೆಚ್ಚು ಬೆಳಕು ಕಾಣದೆ ಇದ್ದ ಕನ್ನಡ ಸಾಹಿತ್ಯ, ೧೯ನೇ ಶತಮಾನದ ಕೊನೆಗೆ ಹಾಗು ಇಪ್ಪತ್ತನೆ ಶತಮಾನದ ಆರಂಭದಲ್ಲಿ ಹೊಸ ಹುಟ್ಟು ಪಡೆಯಿತು.ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಗೆ ಕಾರಣವಾಯಿತು. ಈ ಹಂತದಲ್ಲಿಬಿ.ಎಂ.ಶ್ರೀ,ಕುವೆಂಪು,ಬೇಂದ್ರೆ,ಶಿವರಾಮ ಕಾರಂತ ಮೊದಲಾದ ಶ್ರೇಷ್ಠ ಲೇಖಕರು ಬೆಳಕಿಗೆ ಬಂದರು.

ಈ ಕಾಲದ ಸಾಹಿತ್ಯ ಪ್ರಕಾರಗಳು ರೊಮ್ಯಾಂಟಿಕ್ಇಂಗ್ಲಿಷ್ ಕಾವ್ಯ ಮತ್ತು ಗ್ರೀಕ್ರುದ್ರ ನಾಟಕಗಳಿಂದ ಪ್ರಭಾವಿತವಾಯಿತು. ಈ ಘಟ್ಟದಬೆಳವಣಿಗೆಯನ್ನು ತಂದವರು ಬಿ.ಎಂ.ಶ್ರೀ, ತಮ್ಮಇಂಗ್ಲಿಷ್ ಗೀತಗಳುಪುಸ್ತಕ ದೊಂದಿಗೆ. ಅನೇಕ ಸುಶಿಕ್ಷಿತ ಕನ್ನಡಿಗರು, ಮುಖ್ಯವಾಗಿ ಶಿಕ್ಷಕ ವೃತ್ತಿಯಲ್ಲಿದ್ದವರು, ಮಾತೃಭಾಷೆಯಲ್ಲಿ ಬರೆಯುವುದರ ಮಹತ್ವವನ್ನು ಕಂಡು ಕೊಂಡು ಕನ್ನಡಸಾಹಿತ್ಯಕ್ಕೆ ಪ್ರೇರಣೆಯನ್ನೊದಗಿಸಿದರು.

ಇದಕ್ಕೆ ಉದಾಹರಣೆಯಾಗಿ ಕುವೆಂಪು – ತಮ್ಮ ಒಬ್ಬ ಶಿಕ್ಷಕರಿಂದ (ಬ್ರಿಟಿಷ್ ಮೂಲದವರು) ಕನ್ನಡದಲ್ಲಿ ಬರೆಯುವುದರ ಮಹತ್ವವನ್ನು ಕಂಡುಕೊಂಡು ಮುಂದೆರಾಷ್ಟ್ರಕವಿಬಿರುದಿಗೆ ಪಾತ್ರರಾದರು. ಅವರಪ್ರಕೃತಿಪ್ರೇಮ, ಮಾನವನ ಉನ್ನತಿಯಲ್ಲಿ ನಂಬಿಕೆ ಮತ್ತು ಪ್ರಕೃತಿ ಮತ್ತು ದೇವರ ಸಮ್ಮಿಶ್ರಣವನ್ನು ಕಾಣುವ ಅವರ ಮನಸ್ಸು ಅವರನ್ನು ಕನ್ನಡದ ಉಚ್ಚ ಕವಿಗಳಲ್ಲಿ ಒಬ್ಬರನ್ನಾಗಿ ಮಾಡಿವೆ. ಅವರ ಅತಿ ಪ್ರಸಿದ್ಧ ಕಾವ್ಯ ಕೃತಿ ಶ್ರೀ ರಾಮಾಯಣ ದರ್ಶನಂ.

ಇದಕ್ಕೆ ಉದಾಹರಣೆಯಾಗಿ ನಿಂತಿರುವ ಮತ್ತೊಬ್ಬ ಲೇಖಕರೆಂದರೆಶಿವರಾಮ ಕಾರಂತ- ಅತ್ಯಂತ ಬುದ್ಧಿಮತ್ತೆಯ, ಆಳವಾದ ಆದರ್ಶಗಳುಳ್ಳ ವ್ಯಕ್ತಿತ್ವ, ಹಾಗೂ ಅಷ್ಟೇ ಆಳವಾದ ಸಾಮಾಜಿಕ ಕಳಕಳಿಯಿದ್ದ ಲೇಖಕರು. ಅವರ ಶಕ್ತಿಶಾಲಿ ಸಾಮಾಜಿಕ ಕಾದಂಬರಿಗಳಲ್ಲಿ ಪ್ರಸಿದ್ಧವಾದವು-ಚೋಮನ ದುಡಿ, ಬೆಟ್ಟದ ಜೀವ, ಮೈಮನಗಳ ಸುಳಿಯಲ್ಲಿ,ಮರಳಿ ಮಣ್ಣಿಗೆಮತ್ತುಮೂಕಜ್ಜಿಯ ಕನಸುಗಳುಮೊದಲಾದುವು.ಈ ಕಾಲದ ಪ್ರಸಿದ್ಧ ಕವಿಗಳು1.ಕುವೆಂಪು,2.ಬಿ.ಎಂ.ಶ್ರೀ,3.ದ.ರಾ.ಬೇಂದ್ರೆ,4.ಪು ತಿ ನ,5.ಕೆ.ಎಸ್. ನರಸಿಂಹಸ್ವಾಮಿ,6.ಎಂ.ಗೋಪಾಲಕೃಷ್ಣ ಅಡಿಗ,7.ಪ್ರೊ.ನಿಸಾರ್ ಅಹಮದ್,8.ಚೆನ್ನವೀರ ಕಣವಿಮೊದಲಾದವರು.9.ಡಾ.ಚಂದ್ರಶೇಖರ್ ಕಂಬಾರ-ಕವಿ- ನಾಟಕಕಾರ – ಕಾದಂಬರಿಕಾರ- ಸಂಶೋಧಕ10.ಡಿ.ವಿ.ಜಿ.

*ಈ ಕಾಲದ ಪ್ರಸಿದ್ಧ ಕಾದಂಬರಿಕಾರರು*

1.ಕುವೆಂಪು,
2.ಶಿವರಾಮ ಕಾರಂತ,
3.ಮಾಸ್ತಿ ವೆಂಕಟೇಶ ಐಯ್ಯಂಗಾರ್,4.ಅ.ನ.ಕೃ,5.ಯು.ಆರ್.ಅನಂತಮೂರ್ತಿ,6.ವಿ. ಕೃ. ಗೋಕಾಕ್
7.ಡಿ.ವಿ.ಗುಂಡಪ್ಪ
8.ಗೊರೂರು ರಾಮಸ್ವಾಮಿ ಅಯ್ಯಂಗಾರ್
9.ಕೆ.ವಿ.ಅಯ್ಯರ್
10.ಮಂಜೇಶ್ವರ ಗೋವಿಂದ ಪೈ
11.ತಿ.ನಂ.ಶ್ರೀ
12.ಎಸ್. ಎಲ್. ಭೈರಪ್ಪ
13.ಕೆ.ಪಿ.ಪೂರ್ಣಚಂದ್ರ ತೇಜಸ್ವಿಮುಂತಾದವರು.

*ಈ ಕಾಲದ ಪ್ರಸಿದ್ಧ ನಾಟಕಕಾರರು*

1.ಟಿ.ಪಿ.ಕೈಲಾಸಂ,
2.ಶ್ರೀರಂಗ,
3.ಕುವೆಂಪು,
4.ಬಿ.ಎಂ.ಶ್ರೀ,
5.ಬಿ.ವಿ.ಕಾರಂತ್ಮೊದಲಾದವರು.

ನವ್ಯ೧೯೪೭ ರ ಭಾರತದ ಸ್ವಾತಂತ್ರ್ಯಾನಂತರ ಕನ್ನಡ ಸಾಹಿತ್ಯದಲ್ಲಿ ಇನ್ನೊಂದು ಹೊಸ ಸಾಹಿತ್ಯ ಪ್ರಕಾರದ ಉಗಮವಾಯಿತು:ನವ್ಯ.

ಈ ಪ್ರಕಾರದ ಪಿತಾಮಹರೆಂದರೆಗೋಪಾಲಕೃಷ್ಣ ಅಡಿಗರು.
ನವ್ಯ ಕವಿಗಳು ನಿರಾಶಾವಾದಿ ಬುದ್ಧಿಜೀವಿಗಳಿಗಾಗಿ ಹಾಗೂ ನಿರಾಶಾ ವಾದಿ ಬುದ್ಧಿಜೀವಿಗಳಂತೆ ಕಾವ್ಯ ರಚಿಸಿದರು. ಭಾಷಾಪ್ರಯೋಗದ ಚಮತ್ಕಾರ ಹಾಗೂ ಕಾವ್ಯತಂತ್ರ ಹೊಸ ಎತ್ತರವನ್ನು ಈ ಪ್ರಕಾರದಲ್ಲಿ ಕಂಡಿತು.ಇತರ ಪ್ರಕಾರಗಳು ಕಳೆದ ಐದು ದಶಕಗಳಲ್ಲಿ ಕನ್ನಡ ಸಾಹಿತ್ಯದ ದಾರಿ ಸಾಮಾಜಿಕ ವಿಷಯಗಳನ್ನು ಕುರಿತದ್ದಾಗಿದೆ. ಜಾತಿಪದ್ಧತಿಯ ತಾರತಮ್ಯಗಳಿಂದ ಬಂಡಾಯ ಮತ್ತು ದಲಿತಕಾವ್ಯ ಪ್ರೇರಿತವಾಗಿದೆ. ಸ್ತ್ರೀ-ವಿಮೋಚನಾ ಚಳುವಳಿಗಳು ಸ್ತ್ರೀ-ಕಾವ್ಯ ಪ್ರಕಾರಕ್ಕೆ ಎಡೆ ಮಾಡಿ ಕೊಟ್ಟಿವೆ. ಸಣ್ಣ ಕಥೆಗಳು ಹಾಗೂ ಭಾವಗಿತೆಗಳು ಸಹ ಇಪ್ಪತ್ತನೆ ಶತಮಾನದಲ್ಲಿ ಜನಪ್ರಿಯವಾದ ಸಾಹಿತ್ಯ ಪ್ರಕಾರಗಳು. ಪ್ರಶಸ್ತಿಗಳು ಕನ್ನಡ ಸಾಹಿತ್ಯದ ಶಕ್ತಿಗೆ ಕನ್ನಡಿಯಾಗಿ ಕನ್ನಡ ಸಾಹಿತ್ಯಕ್ಕೆ ಇದುವರೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಇದು ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು. ಆಗಸ್ಟ್ ೨೦೦೪ ರ ವರೆಗೆ ಒಟ್ಟು ೪೬ ಕನ್ನಡ ಭಾರತ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.ಜನಸಂಪರ್ಕಯಾವುದೇ ಭಾಷೆಯ ಸಾಹಿತ್ಯದ ಜನಪ್ರಿಯತೆ ಸುಶಿಕ್ಷಿತ ಮತ್ತು ಆಸಕ್ತಜನರಿಂದೆ ಪಡೆದ ಮನ್ನಣೆಯನ್ನು ಅವಲಂಬಿಸುತ್ತದೆ. ಆದರೆ ಕಾವ್ಯದ ನಿಜವಾದ ಜನಪ್ರಿಯತೆ ತಿಳಿದು ಬರುವುದು ಅದು ಸಾಮಾನ್ಯ ಜನರ ಬಾಯಲ್ಲಿ ನಲಿದಾಗ. ಯಾವುದೇ ಸಾಹಿತ್ಯ ಪ್ರಕಾರಕ್ಕೂ ಸರ್ವಜನಮಾನ್ಯತೆ ಪಡೆಯುವುದು ಕಷ್ಟ. ಕನ್ನಡ ಸಾಹಿತ್ಯದ ಕೆಲವು ಪ್ರಕಾರಗಳು ಇಂತಹ ಮಾನ್ಯತೆಯನ್ನು ಪಡೆದಿವೆ.ಕುಮಾರವ್ಯಾಸನ ಭಾರತ ಇಂದಿಗೂ ಜನಪ್ರಿಯವಾಗಿ ಉಳಿದಿದೆ. ಭಾವಗೀತೆಗಳು ಅನೇಕ ಕನ್ನಡ ಹಾಡುಗಳನ್ನು ಜನಪ್ರಿಯಗೊಳಿಸಿ ಜನರ ಬಾಯಲ್ಲಿ ಓಡಾಡುತ್ತಿವೆ.

*ಹಳೆ ಕನ್ನಡದ ಗದ್ಯ/ಕವಿಗಳು*

1.ಕವಿರಾಜಮಾರ್ಗ – ಶ್ರೀವಿಜಯ
2.ಛಂದೊಂಬುಧಿ – ನಾಗವರ್ಮ-೨
3.ಕವಿಜೀಹ್ವಾಬಂಧನ – ಈಶ್ವರಕವಿ
4.ಛಂದಸ್ಸಾರ – ಗುಣವರ್ಮ
5.ನಂದಿಛಂದಸ್ಸು – ವೀರಭದ್ರ
6.ವಡ್ಡಾರಾಧನೆ -ಶಿವಕೋಟ್ಯಾಚಾರ್ಯನಾಗವರ್ಮ-೨
1.ಉದಯಾದಿತ್ಯಾಲಂಕಾರ – ಉದಯಾದಿತ್ಯ
2.ಶೃಂಗಾರ ರತ್ನಾಕರ – ಕಾಮದೇವ
3.ಮಾಧವಾಲಂಕಾರ – ಮಾಧವ
4.ರಸರತ್ನಾಕರ – ಸಾಳ್ವ
5.ನರಪತಿಚರಿತೆ – ಲಿಂಗರಾಜ
6.ಅಪ್ರತಿಮವೀರಚರಿತೆ – ತಿರುಮಲರಾಯ
7.ಶಬ್ದಮಣಿದರ್ಪಣ – ಕೇಶಿರಾಜ